Leviticus 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
Kannada BSI Bible 2016
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ದಾಸರೂ ಅವನ ಮನೆಯಲ್ಲಿ ಹುಟ್ಟಿದ ದಾಸರೂ ಅದನ್ನು ಊಟಮಾಡಬಹುದು.
Kannada Bible (KNCL) BSI 2016
ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.