Leviticus 22:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
Kannada BSI Bible 2016
ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
Kannada Bible (KNCL) BSI 2016
ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”