Leviticus 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
Kannada BSI Bible 2016
ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮಮಾಡುವಾಗ
Kannada Bible (KNCL) BSI 2016
“ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ