Leviticus 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ. (Verses 19-20)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
Kannada BSI Bible 2016
ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಒಪ್ಪಿಸಬೇಕು.
Kannada Bible (KNCL) BSI 2016
ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.