Leviticus 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
Kannada BSI Bible 2016
ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು.
Kannada Bible (KNCL) BSI 2016
ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.