Leviticus 22:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
Kannada BSI Bible 2016
ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
Kannada Bible (KNCL) BSI 2016
ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.