Leviticus 22:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
Kannada BSI Bible 2016
ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶುದ್ಧವಾದ ಕ್ರಿವಿುಕೀಟ ಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನಾಗಲಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು;
Kannada Bible (KNCL) BSI 2016
ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,