Leviticus 22:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
Kannada BSI Bible 2016
ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಕೂಡದು.
Kannada Bible (KNCL) BSI 2016
ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.