Leviticus 22:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
Kannada BSI Bible 2016
ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು;
Kannada Bible (KNCL) BSI 2016
ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.