Leviticus 22:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
Kannada BSI Bible 2016
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
Kannada Bible (KNCL) BSI 2016
“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.