Leviticus 23:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
Kannada BSI Bible 2016
ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
Kannada Bible (KNCL) BSI 2016
ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು. ಆ ಸಿವುಡನ್ನು ನೈವೇದ್ಯವಾಗಿ ಆರತಿಯೆತ್ತುವ ದಿನದಂದೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.