Leviticus 23:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
Kannada BSI Bible 2016
ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
Kannada Bible (KNCL) BSI 2016
ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.