Leviticus 23:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.