Leviticus 23:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
Kannada BSI Bible 2016
ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
Kannada Bible (KNCL) BSI 2016
ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.