Leviticus 23:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
Kannada BSI Bible 2016
ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.
Kannada Bible (KNCL) BSI 2016
ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.