Leviticus 23:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
Kannada Bible (KNCL) BSI 2016
“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.