Leviticus 23:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.
Kannada BSI Bible 2016
ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
Kannada Bible (KNCL) BSI 2016
ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.