Leviticus 23:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
Kannada BSI Bible 2016
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು.
Kannada Bible (KNCL) BSI 2016
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.