Leviticus 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
Kannada BSI Bible 2016
ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.
Kannada Bible (KNCL) BSI 2016
ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.