Leviticus 23:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
Kannada BSI Bible 2016
ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಪ್ರತಿ ವರುಷದಲ್ಲಿಯೂ ಏಳು ದಿನಗಳವರೆಗೆ ಈ ಉತ್ಸವವನ್ನು ಆಚರಿಸಬೇಕು; ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
Kannada Bible (KNCL) BSI 2016
ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.