Leviticus 23:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಈ ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
Kannada BSI Bible 2016
ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದಾಗ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವದು. ನಾನು ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”