Leviticus 23:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
Kannada BSI Bible 2016
ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.
Kannada Bible (KNCL) BSI 2016
ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”