Leviticus 24:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
Kannada BSI Bible 2016
ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.
Kannada Bible (KNCL) BSI 2016
ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.