Leviticus 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
Kannada BSI Bible 2016
ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತೀಕಾರ ಮಾಡಿಸಬೇಕು.
Kannada Bible (KNCL) BSI 2016
ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು ಕೀಳಿಸಬೇಕು. ಮತ್ತೊಬ್ಬನನ್ನು ಅಂಗವಿಕಲನನ್ನಾಗಿ ಮಾಡಿದವನಿಗೆ ಅದೇ ರೀತಿ ಪ್ರತೀಕಾರ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.