Leviticus 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
Kannada BSI Bible 2016
ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡುಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.
Kannada Bible (KNCL) BSI 2016
ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.