Leviticus 24:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
Kannada BSI Bible 2016
ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಯ ಹೊರಗೆ ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
Kannada Bible (KNCL) BSI 2016
ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.