Leviticus 24:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
Kannada BSI Bible 2016
ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತಿಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಡಬೇಕು.
Kannada Bible (KNCL) BSI 2016
ಆರೋನನು ಪ್ರತಿನಿತ್ಯವೂ ಸರ್ವೇಶ್ವರನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕ ಬಂಗಾರದ ದೀಪವೃಕ್ಷದ ಮೇಲೆ ಸರಿಯಾಗಿ ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.