Leviticus 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರತಿ ಸಬ್ಬತ್‌ದಿನದಲ್ಲಿ ಆರೋನನು ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಯನ್ನು ಕ್ರಮವಾಗಿ ಯಾವಾಗಲೂ ಇಡಬೇಕು. ಇಸ್ರೇಲರೊಂದಿಗೆ ಮಾಡಲ್ಪಟ್ಟ ಒಡಂಬಡಿಕೆಯು ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಯಾವಾಗಲೂ ಪ್ರತಿ ಸಬ್ಬತ್‍ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲ್ಯರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.