Leviticus 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
Kannada BSI Bible 2016
ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.
Kannada Bible (KNCL) BSI 2016
ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”