Leviticus 25:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
Kannada BSI Bible 2016
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.
Kannada Bible (KNCL) BSI 2016
ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.