Leviticus 25:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
Kannada BSI Bible 2016
ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಐವತ್ತನೆಯ ವರುಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು; ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಆದ ಹಣ್ಣನ್ನು ಸಂಗ್ರಹಿಸಬಾರದು.
Kannada Bible (KNCL) BSI 2016
ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.