Leviticus 25:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ನೆರೆಯವನ ಭೂಮಿಯನ್ನು ಕೊಂಡುಕೊಳ್ಳಲು ನೀವು ಬಯಸುವುದಾದರೆ, ಆಗ ಕಳೆದ ಜ್ಯೂಬಿಲಿ ವರ್ಷದಿಂದ ಈಗ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ನೀವು ಭೂಮಿಯನ್ನು ಮಾರುವುದಾದರೆ, ಪೈರುಗಳನ್ನು ಕೊಯ್ಯುವುದಕ್ಕಿರುವ ವರ್ಷಗಳನ್ನು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
Kannada BSI Bible 2016
ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳೆದ ಜೂಬಿಲಿ ಸಂವತ್ಸರದಿಂದ ಇಷ್ಟು ವರುಷವಾಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು;
Kannada Bible (KNCL) BSI 2016
ಕಳೆದ ಜೂಬಿಲಿ ವರ್ಷದಿಂದ ಇಷ್ಟು ವರ್ಷ ಆಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅಂತೆಯೇ ಮಾರುವವನು ಇಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೂಬಿಲಿಯ ತರುವಾಯ ವರ್ಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರ್ಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.