Leviticus 25:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
Kannada BSI Bible 2016
ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಮಾರುವವನು ಇಷ್ಟು ವರುಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. [ಮುಂದಣ ಜೂಬಿಲಿ ಸಂವತ್ಸರದ ತನಕ] ಹೆಚ್ಚು ವರುಷಗಳಾದರೆ ಭೂವಿುಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು; ಭೂವಿುಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
Kannada Bible (KNCL) BSI 2016
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.