Leviticus 25:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
Kannada BSI Bible 2016
ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಎಂಟನೆಯ ವರುಷದಲ್ಲಿ ಬೀಜವನ್ನು ಬಿತ್ತಿ ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರುಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನಮಾಡುವಿರಿ.
Kannada Bible (KNCL) BSI 2016
ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.