Leviticus 25:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
Kannada BSI Bible 2016
ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.
Kannada Bible (KNCL) BSI 2016
“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.