Leviticus 25:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
Kannada BSI Bible 2016
ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.
Kannada Bible (KNCL) BSI 2016
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.