Leviticus 25:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
Kannada BSI Bible 2016
ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬೈಲಿನ ಹೊಲಗಳಂತೆ ಎಣಿಸಲ್ಪಡಬೇಕು. ಅವುಗಳನ್ನು ಬಿಡಿಸುವ ಅಧಿಕಾರವಿರುವದು; ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
Kannada Bible (KNCL) BSI 2016
ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು.