Leviticus 25:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
Kannada BSI Bible 2016
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವನಿಂದ ಬಡ್ಡಿಯನ್ನಾಗಲಿ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
Kannada Bible (KNCL) BSI 2016
ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.