Leviticus 25:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
Kannada BSI Bible 2016
ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವದಕ್ಕೂ ನಿಮಗೆ ಕಾನಾನ್‍ದೇಶವನ್ನು ಕೊಡುವದಕ್ಕೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದವನೇ.
Kannada Bible (KNCL) BSI 2016
ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ.