Leviticus 25:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
Kannada BSI Bible 2016
ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೂಲಿಯವನಂತೆಯೂ ಪರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
Kannada Bible (KNCL) BSI 2016
ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ.