Leviticus 25:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
Kannada BSI Bible 2016
ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲ್ಯರಾದ ನೀವಾದರೋ ಎಲ್ಲರೂ ಸಹೋದರರಾಗಿರುವದರಿಂದ ಒಬ್ಬರಿಂದೊಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
Kannada Bible (KNCL) BSI 2016
ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸೊತ್ತಾಗಿ ಕೊಟ್ಟುಬಿಡಬಹುದು. ಅವರನ್ನು ಶಾಶ್ವತ ಜೀತದಾರರನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಸ್ರಯೇಲರಾದ ನೀವೆಲ್ಲರು ಸಹೋದರರು. ಆದುದರಿಂದ ಒಬ್ಬರಿಂದೊಬ್ಬರು ಕ್ರೂರವಾಗಿ ಸೇವೆ ಮಾಡಿಸಿಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ.