Leviticus 25:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
Kannada BSI Bible 2016
ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇಯಾಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
Kannada Bible (KNCL) BSI 2016
ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.