Leviticus 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
Kannada BSI Bible 2016
ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರುಷವೆಲ್ಲಾ ಭೂವಿುಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
Kannada Bible (KNCL) BSI 2016
ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.