Leviticus 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
Kannada BSI Bible 2016
ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಏಳು ವರುಷಕ್ಕೊಂದರಂತೆ ಏಳು ಸಬ್ಬತ್ ವರುಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಾಲ್ವತ್ತೊಂಭತ್ತು ವರುಷಗಳು ಕಳೆದ ಮೇಲೆ
Kannada Bible (KNCL) BSI 2016
“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.