Leviticus 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
Kannada BSI Bible 2016
ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬಹುದಿವಸದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
Kannada Bible (KNCL) BSI 2016
ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.