Leviticus 26:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆನು. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆನು. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
Kannada BSI Bible 2016
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
Kannada Bible (KNCL) BSI 2016
ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.