Leviticus 26:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಟವಾದ ಪಟ್ಟಣಗಳನ್ನು ನಾಶಮಾಡುವೆನು. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.
Kannada BSI Bible 2016
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ನೀವು ಸಾಗುವಳಿಮಾಡುವ ಭೂವಿುಯನ್ನು ತಾಮ್ರದಂತೆಯೂ ಮಾಡುವೆನು;
Kannada Bible (KNCL) BSI 2016
ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.