Leviticus 26:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆನು. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
Kannada BSI Bible 2016
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
Kannada Bible (KNCL) BSI 2016
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.