Leviticus 26:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆನು. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆನು. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
Kannada BSI Bible 2016
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.
Kannada Bible (KNCL) BSI 2016
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.