Leviticus 26:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.
Kannada BSI Bible 2016
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್‍ಕಾಲವನ್ನು ಅನುಭವಿಸುವದು.
Kannada Bible (KNCL) BSI 2016
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.